ಗುಲಾಮರ ಅಪ್ಪ ಎಂಬ ಫೇಸ್ ಬುಕ್ನ್ನು ನಿಷೇಧಿಸಲು ಡಿ ಎಸ್ ಎಸ್ ಒತ್ತಾಯ. ಮಾಲೂರು: ಸಾಮಾಜಿಕ ಜಾಲತಾಣಗಳಲ್ಲಿ ದೇಶದ ಮಹಾನ್ ನಾಯಕರನ್ನು ಅವಮಾನಿಸುತ್ತಿರುವ ಹಾಗೂ ಸಮುದಾಯಗಳ ನಡುವೆ ದ್ವೇಷದ ವಿಷಬೀಜ ಬಿತ್ತುತ್ತಿರುವ "ಗುಲಾಮರ ಅಪ್ಪ" ಎಂಬ ಪೇಸ್ ಬುಕ್ ಪೇಜ್ ಅನ್ನು ತಕ್ಷಣವೇ ನಿಷೇಧಿಸಬೇಕು ಹಾಗೂ ಈ ಖಾತೆಯಲ್ಲಿ ಇಂತಹ ಕೃತ್ಯಗಳನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆ ಒತ್ತಾಯಿಸಿದರು. ನಗರದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಶೀರಸ್ತೆದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾ