ಬೆಂಗಳೂರು ಉತ್ತರ: ಕಮಿಷನರ್ ನೇತೃತ್ವದಲ್ಲಿ ತಡರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳ ಸಿಟಿ ರೌಂಡ್ಸ್
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ತಡರಾತ್ರಿ ಬೆಂಗಳೂರಿನಾದ್ಯಂತ ಪೊಲೀಸರು ವಿಶೇಷ ರಾತ್ರಿ ಗಸ್ತು ಕಾರ್ಯಾಚರಣೆ ಕೈಗೊಂಡಿದ್ದಾರೆ. ಸೆಪ್ಟೆಂಬರ್ 20ರಂದು ರಾತ್ರಿ 11 ಗಂಟೆಯಿಂದ ನಡೆದ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ಎಲ್ಲಾ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಎಸಿಪಿಗಳು, ಪಿಐಗಳು ಹಾಗೂ ಪಿಎಸ್‌ಐಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳು, ಹೊರವಲಯಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿ ಗಸ್ತು ಕಾರ್ಯಾಚರಣೆ ಕೈಗೊಂಡರು.ಇದೇ ಸಂದರ್ಭದಲ್ಲಿ ಪೊಲೀಸ್ ಆಯುಕ್ತರು ಎಂ.ಜಿ.ರಸ್ತೆ, ಚರ್ಚ್ ಸ್ಟ್ರೀಟ್, ಮೆಜೆಸ್ಟಿಕ್‌ನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ,ಇತರ ನಾಕಾಬಂದಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.