ಬೆಂಗಳೂರು ಉತ್ತರ: ಕ್ರೀಡೆಯಲ್ಲಿ ಗೆಲುವು-ಸೋಲಿಗಿಂತ ಭಾಗವಹಿಸುವಿಕೆ ಅತಿ ಮುಖ್ಯ: ನಗರದಲ್ಲಿ ಸಿ.ಎಂ
ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ 6 ಗಂಟೆಗೆ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ