ಶಿವಮೊಗ್ಗ: ನಗರದಲ್ಲಿ ಕಾರ್ಮಿಕ ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ
ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ, ಉದ್ಯೋಗದಾತರ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಏಕ ಪಕ್ಷಿಯವಾಗಿ ಜಾರಿಗೊಳಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಕಾರ್ಮಿಕ ಕಾಯ್ದೆಯ ಪ್ರತಿಯನ್ನು ಸುಟ್ಟುಹಾಕುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.