ಶಿರಸಿ: ಕಾಂಗ್ರೆಸ್ ವಿರುದ್ಧ ಜು.31 ರಂದು ಮುಂಡಗೋಡಿನಲ್ಲಿ ಪ್ರತಿಭಟನೆ : ದೀನದಯಾಳ ಭವನದಲ್ಲಿ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ
ಶಿರಸಿ : ಕಾಂಗ್ರೆಸ್ ರೈತ ವಿರೋಧಿ ಸರ್ಕಾರದ ನಡೆಯನ್ನು ಖಂಡಿಸಿ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಜು ೩೧ ರಂದು ಮುಂಡಗೋಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ ತಿಳಿಸಿದರು. ಅವರು ಸೋಮವಾರ ನಗರದ ದೀನದಯಾಳ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಜಾರಿಗೊಳಿಸಲಾಗಿದ್ದ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.