ಬೆಳಗಾವಿ: ದೇಸೂರು ಶಾಲೆಗೆ 5 ಎಕರೆ ಜಮೀನು ಹಾಗೂ 50 ಲಕ್ಷದಲ್ಲಿ ಗ್ರಂಥಾಲಯ ನಿರ್ಮಾಣದ ಭರವಸೆ
ಬೆಳಗಾವಿಯ ದೇಸೂರು ಗ್ರಾಮದ ಸರ್ಕಾರಿ ಶಾಲೆಗೆ 5 ಎಕರೆ ಜಮೀನು ಮಂಜೂರು ಮಾಡಿಸಲು ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ ಗ್ರಂಥಾಲಯ ನಿರ್ಮಿಸಿಕೊಡಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.