ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ ಅವರು ಗ್ರಾಹಕ ಸೇವಾ ಕೇಂದ್ರವನ್ನು ಖುದ್ದಾಗಿ ಭೇಟಿ ನೀಡಿ, ದೂರವಾಣಿ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದರು. ಸಿಬ್ಬಂದಿಗಳ ಸ್ಪಂದನೆಯನ್ನು ಪರಿಶೀಲಿಸಿ, ಜನರ ಕುಂದುಕೊರತೆಗಳಿಗೆ ತ್ವರಿತವಾಗಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದು ನಮ್ಮ ಗುರಿ. ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಗ್ರಾಹಕ ಸೇವಾ ಕೇಂದ್ರವನ್ನು ಸಂಪರ್ಕಿಸಿ ಪರಿಹಾರ ಪಡೆಯಬೇಕು ಎಂದು ಗ್ರಾಮಕರಲ್ಲಿ ಕೋರಿದರು..