ಗದಗ: ಆನೆಕಾಡು ಬಳಿ ಮಡಿಕೇರಿಯಿಂದ ಗದಗಕ್ಕೆ ತೆರಳುತ್ತಿದ್ದ ಮಾರುತಿ ವ್ಯಾನ್ ಮೇಲೆ ಕಾಡಾನೆ ದಾಳಿ
Gadag, Gadag | May 5, 2025 ಮಡಿಕೇರಿಯಿಂದ ಗದಗಕ್ಕೆ ತೆರಳುತ್ತಿದ್ದ ಮಾರುತಿ ಓಮ್ನಿ ವ್ಯಾನ್ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಆನೆಕಾಡು ಹೆದ್ದಾರಿಯ ಅರಣ್ಯ ಡಿಪೋ ಸಮೀಪ ನಡೆದಿರುವ ಕುರಿತು ವರದಿಯಾಗಿದೆ. ಮೂಲತಃ ಗದಗದವರಾದ ಶರೀಫ್ ಎಂಬುವವರು ಮಡಿಕೇರಿಯಲ್ಲಿ ಟೈಲ್ಸ್ ಕೆಲಸ ಮಾಡಿಕೊಂಡಿದ್ದು, ಊರಿನಲ್ಲಿ ನಡೆಯಲಿರುವ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾರುತಿ ಓಮ್ನಿ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.