ಮೊಳಕಾಲ್ಮುರು: ಪಟ್ಟಣದಲ್ಲಿ ನಡೆಯುತ್ತಿರುವ ಸಂತೆಯನ್ನು ಬೇರೆಡೆ ಸ್ಥಳಂತಾರ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬುಧವಾರ ಪಟ್ಟಣದ ತಾಲೂಕು ಆಡಳಿತ ಸೌಧ ಆವರಣದಲ್ಲಿ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯ ಉಪಾಧ್ಯಕ್ಷ ದೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಪಪಂ ಅಧಿಕಾರಿಗಳ ಬೇಜವದ್ವಾಂತನದಿಂದ ವಾರದ ಸಂತೆಯು ಪಟ್ಟಣದ ಮಧ್ಯಭಾಗದಿಂದ ಅನಂತಪುರಕ್ಕೆ ಸಂಪರ್ಕ ಕಲ್ಪಿಸಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿದೆ. ಈ ರಸ್ತೆಯಲ್ಲಿ ರಭಸವಾಗಿ ಸಂಚರಿಸುವ ಬೃಹತ್ ವಾಹನಗಳ ಭರಾಟೆಯಲ್ಲಿ ಪ್ರಾಣದ ಹಂಗನ್ನೂ ಮರೆತು ಗ್ರಾಹಕರು ಹಾಗೂ ರೈತರು ವ್ಯವಹರಿಸಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.