ಶಿವಮೊಗ್ಗ: ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದ್ದು ಖುಷಿ ತರಿಸಿದೆ, ಶಿವಮೊಗ್ಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಣಂದೂರು ಲಿಂಗಪ್ಪ
ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನನಗೆ ಸಿಕ್ಕಿದ್ದು ಖುಷಿ ತರಿಸಿದೆ ಎಂದು 2025 ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಣಂದೂರು ಲಿಂಗಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮಾತನಾಡಿದ ಅವರು, ನಮ್ಮ ಸೇವೆಯನ್ನ ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ, ಇದು ನನಗೆ ಖುಷಿ ತರಿಸಿದೆ. ಸರ್ಕಾರ ಕನ್ನಡ ಉಳಿವಿಗಾಗಿ ಸಾಕಷ್ಟು ಪ್ರಯತ್ನ ಮಾಡ್ತಿದೆ, ಸಿಎಂ ಸಿದ್ದರಾಮಯ್ಯ ಕನ್ನಡಕ್ಕಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ನಾನು ವಿದ್ಯಾರ್ಥಿ ಜೀವನದಿಂದ ಹೋರಾಟ ಆರಂಭಸಿದ್ದೆ, ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣ ಮಾಡಲು ಹೋರಾಡಿದ್ದು ನಾನೇ, ನನ್ನ ಉಸಿರು ಇರುವರೆಗೂ ಕನ್ನಡಕ್ಕಾಗಿ ಹೃದಯ ಮಿಡಿಯುತ್ತದೆ ಎಂದರು