ಡಿಸೆಂಬರ್ 14,ಭಾನುವಾರ ರಾತ್ರಿ 9:30ಕ್ಕೆ, ಕಂಪ್ಲಿಗೆ ಭೇಟಿ ನೀಡಿದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಕಂಪ್ಲಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಕಂಪ್ಲಿ ಹಾಗೂ ಕುರುಗೋಡು ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕಾಗಿ ನಡೆಯುತ್ತಿದ್ದು, ಕ್ಷೇತ್ರದ ಶಾಸಕರು ಸಮರ್ಪಕವಾಗಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.