ಹುಬ್ಬಳ್ಳಿ ನಗರ: ನಗರದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪರಿಶೀಲನಾ ಸಭೆ ನಡೆಸಿದ ಶಾಸಕ ಮಹೇಶ್ ಟೆಂಗಿನಕಾಯಿ
ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉಣಕಲ್ ಹಾಗೂ ಸಾಯಿನಗರ ಪ್ರದೇಶಗಳಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಾರ್ಡ್ ನಂಬರ್ 50ರ ಹೊಸೂರಿನಲ್ಲಿ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಣಿವಿಲಾಸ ಅಪಾರ್ಟ್ಮೆಂಟ್ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ರಾಜಣ್ಣ ಕೊರವಿ, ಶ ಉಮೇಶಗೌಡ ಕೌಜಗೇರಿ, ಪಾಲಿಕೆಯ ಆಯುಕ್ತರಾದ ಶ್ರೀ ರುದ್ರೇಶ ಗಾಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.