ಬೆಂಗಳೂರು ದಕ್ಷಿಣ: ಟೀಕೆಗಳನ್ನು ಸ್ವಾಗತಿಸುತ್ತೇನೆ, ವಿಕೋಪಕ್ಕೆ ಹೋಗಿ ಟೀಕೆ ಮಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ: ನಗರದಲ್ಲಿ ಡಿಸಿಎಂ
ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಮ್ಮಿಕೊಂಡಿದ್ದ "ಬೆಂಗಳೂರು ನಡಿಗೆ" ಅಭಿಯಾನದ ಅಂಗವಾಗಿ "ನಾಗರಿಕರೊಂದಿಗೆ ಸಂವಾದ" ನಡೆಸಿ, ಅವರ ಅಹವಾಲುಗಳನ್ನು ಆಲಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. "ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು,