ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಜೈಲು ಮುಖ್ಯ ಅಧೀಕ್ಷಕರು ಗುರುವಾರ ದಿಢೀರ್ ದಾಳಿ ನಡೆಸಿ ಕೈದಿಗಳು ಬಳಸುತ್ತಿದ್ದ ಮೊಬೈಲ್ ಫೋನ್, ಚಾರ್ಜರ್, ಇಯರ್ ಪೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಜೈಲ್ ಮುಖ್ಯ ಅಧೀಕ್ಷಕ ರಂಗನಾಥ್ ಕಾರ್ಯಾಚರಣೆ ನಡೆಸಿ ಜೈಲಿನ ವಿವಿಧ ಸೆಲ್ ಗಳನ್ನು ತಪಾಸಣೆ ನಡೆಸಿದಾಗ ಖೈದಿಗಳು ಬಳಸುತ್ತಿದ್ದ 3 ಮೊಬೈಲ್ ಫೋನ್, 2 ಇಯರ್ ಫೋನ್, 3 ಮೊಬೈಲ್ ಚಾರ್ಜರ್, 4 ಸಿಮ್ ಕಾರ್ಡ್, ಮೂರು ಡಾಟಾ ಕೇಬಲ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.