ಸಾಗರ: ಸಿಎಂ ಬದಲಾವಣೆ ನಮ್ಮ ಕೈಯಲ್ಲಿಲ್ಲ, ಹೈಕಮಾಂಡ್ ನಿರ್ದಾರಕ್ಕೆ ನಾವು ಬದ್ಧ ಎಂದ ಸಾಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ
Sagar, Shimoga | Nov 4, 2025 ರಾಜ್ಯ ಸರ್ಕಾರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕೇಳಿಬರುತ್ತಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಬದಲಾವಣೆ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರದಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಾಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅಥವಾ ಸಚಿವರ ಬದಲಾವಣೆ ಮಾಡುವ ಅಧಿಕಾರ ನಮ್ಮ ಶಾಸಕರ ವ್ಯಾಪ್ತಿಯಲ್ಲಿಲ್ಲ. ಈ ಕುರಿತ ಎಲ್ಲಾ ನಿರ್ಧಾರಗಳನ್ನು ರಾಷ್ಟ್ರೀಯ ನಾಯಕರು ತೆಗೆದುಕೊಳ್ಳುತ್ತಾರೆ; ಅವರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ರಾಷ್ಟ್ರೀಯ ನಾಯಕರು ನೀಡುವ ಯಾವುದೇ ಸೂಚನೆಯನ್ನು ನಾವು ಪಾಲಿಸುತ್ತೇವೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ನಿರ್ಧಾರ ಕೈಗೊಳ್ಳಲು ನಮಗೆ ಸಾಧ್ಯವಿಲ್ಲ ಎಂದರು.