ಮಾಗೋಡು ಕಾಲನಿಯನ್ನು ವಿಶೇಷ ಕೈಗಾರಿಕಾ ಪ್ರದೇಶವೆಂದು ಘೋಷಿ ಸುವಂತೆ ಆಗ್ರಹಿಸಿ ಕೈಗಾರಿಕೆ ಸಚಿವರಿಗೆ ಮನವಿ ಸಲ್ಲಿಕೆ ಶಿರಸಿ : ಮಾಜಿ ಶಾಸಕ ವಿ. ಎಸ್ ಪಾಟೀಲ ಮತ್ತು ಬಿಜೆಪಿ ಮುಖಂಡರಾದ ಅನಂತ ಮೂರ್ತಿ ಹೆಗಡೆ ಶಿರಸಿ ನೇತೃತ್ವದ ನಿಯೋಗ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ್ ಅವರನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಭೇಟಿಯಾಗಿ ಯಲ್ಲಾಪುರ ತಾಲೂಕಿನ ಮಾಗೋಡು ಕಾಲನಿಯನ್ನು ವಿಶೇಷ ಕೈಗಾರಿಕಾ ಪ್ರದೇಶ ಅಥವಾ ವಿಶೇಷ ಆರ್ಥಿಕ ವಲಯ' ಎಂದು ಘೋಷಿಸುವಂತೆ ಕೋರಿ ಮನವಿ ಸಲ್ಲಿಸಿದರು.