ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರನ ತಾಯಿ ಸ್ಥಳದಲ್ಲೇ ಸಾವು
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 58 ವರ್ಷದ ನಿರ್ಮಲಾ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಟ್ಟಿಗಿ ಕಡೆಯಿಂದ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಜುನಾಥ್ ಗಾಯಗೊಂಡಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.