ಶಿವಮೊಗ್ಗ: ನ.24 ಮತ್ತು 25 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಶಿವಮೊಗ್ಗ ಜಿಲ್ಲಾ ಪ್ರವಾಸ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌಧರಿಯವರು ನವೆಂಬರ್ 24 ಮತ್ತು 25ರಂದು ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ಕುರಿತಾಗಿ ಸ್ವತಃ ಅವರೇ ಮಾಹಿತಿಯನ್ನು ಶನಿವಾರ ನೀಡಿದ್ದಾರೆ. ನವೆಂಬರ್ 25 ರಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಮಹಿಳೆಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ಹಮ್ಮಿಕೊಂಡಿರುವ ಕುರಿತಾಗಿ ತಿಳಿಸಿರುತ್ತಾರೆ.