ಮಂಡ್ಯ: ಸೆ.16 ಮತ್ತು 17ರಂದು ಮಂಡ್ಯ ನಗರ ನೀರು ಸರಬರಾಜಿನಲ್ಲಿ ವ್ಯತ್ಯಯ
Mandya, Mandya | Sep 15, 2025 ಸೆ.16 ಮತ್ತು 17ರಂದು ಮಂಡ್ಯ ನಗರ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆಯಡಿ ಶ್ರೀರಂಗಪಟ್ಟಣ ಸಮೀಪವಿರುವ ಮೂಲಸ್ಥಾವರಕ್ಕೆ ವಿದ್ಯುತ್ ಸರಬರಾಜು ಮಾಡುವ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಗೆ ಸೇರಿದ ವಿದ್ಯುತ್ ಉಪ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಸೆಸ್ಕ್ ವತಿಯಿಂದ ಸೆ 16 ರಂದು ಹಮ್ಮಿಕೊಳ್ಳಲಾಗಿದೆ. ಸೆ.16 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಶ್ರೀರಂಗಪಟ್ಟಣ ಸಮೀಪವಿರುವ ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆಯ ಮೂಲಸ್ಥಾವರಕ್ಕೆ ವಿದ್ಯುತ್ ಸರಬರಾಜನ್ನು ಕಡಿತಗೊಳಲಿದೆ. ಸದರಿ ದಿನದಂದು ಮಂಡ್ಯ ನಗರಕ್ಕೆ ನೀರನ್ನು ಪಂಪು ಮಾಡಲು ಸಾಧ್ಯವಾಗುವುದಿಲ್ಲ.