ಲಕ್ಷ್ಮೇಶ್ವರ: ಪಟ್ಟಣದಲ್ಲಿನ ಬಾಲಾಜಿ ಆಸ್ಪತ್ರೆಗೆ ಶಾಸಕ ಲಮಾಣಿ ಭೇಟಿ
ಲಕ್ಷ್ಮೇಶ್ವರ ನಗರದ ಬಾಲಾಜಿ ಆಸ್ಪತ್ರೆಗೆ ಶಾಸಕ ಡಾ.ಚಂದ್ರು ಕೆ.ಲಮಾಣಿ ಭೇಟಿ ನೀಡಿದರು. ವಿವಿಧೆಡೆಯಿಂದ ಆಗಮಿಸಿದ್ದ ಜನರ ಅಹವಾಲು ಸ್ವೀಕರಿಸಿ, ತಕ್ಷಣವೇ ಸಮಸ್ಯೆಗಳ ಪರಿಹಾರಕ್ಕಾಗಿ ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಆಸ್ಪತ್ರೆಯಲ್ಲಿ ಇರುವ ಸೌಲಭ್ಯಗಳನ್ನು ಪರಿಶೀಲನೆ ಮಾಡಿದರು. ಆದಷ್ಟು ಬೇಗ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಿದರು.