ಬೆಂಗಳೂರು ಉತ್ತರ: ಮಹದೇವಪುರ ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು, ಸುಟ್ಟು ಭಸ್ಮ
ಬೆಂಗಳೂರಿನ ಮಹದೇವಪುರ ಗರುಡಾಚಾರ್ಯ ಪಾಳ್ಯದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರು ರಸ್ತೆಯಲ್ಲೇ ಹೊತ್ತಿ ಉರಿದಿದೆ. ಕಾರಿನ ಮುಂಭಾಗ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಪರಿಶೀಲಿಸುವಷ್ಟರಲ್ಲಿ ಬೆಂಕಿ ಸಂಪೂರ್ಣವಾಗಿ ವ್ಯಾಪಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಲೋಕೇಶ್ ಎಂಬುವರಿಗೆ ಸೇರಿದ ಈ ಕಾರು ಸುಮಾರು ಎರಡು ವರ್ಷಗಳ ಹಿಂದೆ ಖರೀದಿಸಲಾಗಿತ್ತು. ಮಹದೇವಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.