ದೇವದುರ್ಗ: ಪಟ್ಟಣದ ಜಾಲಹಳ್ಳಿ ಕ್ರಾಸ್ ಬಳಿ ಅಂಗಡಿ ಗೆ ಬಂದಿದ್ದ ವ್ಯಕ್ತಿ ಮೇಲೆ ಬೇರೊಬ್ಬನಿಂದ ಹಲ್ಲೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಜಾಲಹಳ್ಳಿ ಕ್ರಾಸ್ ಬಳಿಯಲ್ಲಿ ಕಿರಾಣಿ ಅಂಗಡಿಗೆ ಬಂದಿದ್ದ ವ್ಯಕ್ತಿ ಒಬ್ಬನ ಮೇಲೆ ಬೇರೊಬ್ಬ ವ್ಯಕ್ತಿ ಹಲ್ಲೆ ಮಾಡಿರುವಂತಹ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ನಿಖರವಾದ ಕಾರಣ ತಿಳಿದು ಬಂದಿಲ್ಲ, ಕಿರಾಣಿ ಅಂಗಡಿ ಗೆ ಬಂದಿದ್ದ ವ್ಯಕ್ತಿ ಮೇಲೆ ಬೇರೊಬ್ಬ ವ್ಯಕ್ತಿ ಹಲ್ಲೆ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸರಿಯಾಗಿದ್ದು ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ವ್ಯಕ್ತಿ ಗಣೇಕಲ್ ಗ್ರಾಮದ ಕಾಶೀನಾಥ ಎಂದು ಹೇಳಲಾಗಿದ್ದು ನಿಖರವಾದ ಘಟನೆಯ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.