ಬೆಂಗಳೂರು ಉತ್ತರ: ನನ್ನನ್ನು ಜೈಲಿಗೆ ಹಾಕಿಸಲು ಕುಮಾರಸ್ವಾಮಿ ಸಂಕಲ್ಪ ಮಾಡಿದ್ದಾರೆ: ನಗರದಲ್ಲಿ ಡಿಸಿಎಂ
ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿ, ಮೊದಲಿನಿಂದಲೂ ನನ್ನನ್ನು ಜೈಲಿಗೆ ಹಾಕಿಸಲೇಬೇಕು ಎಂದು ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿ ಷಡ್ಯಂತ್ರ ಮಾಡುತ್ತಿದ್ದಾರೆ. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರಬರುತ್ತಿದೆ ಎಂದಿದ್ದಾರೆ. ಹಬ್ಬ ಮುಗಿದ ಬಳಿಕ ಅವರಿಗೆ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.