ಚಿತ್ರದುರ್ಗ: ರೈತ ವಿರೋಧಿ ಕಾಯ್ದೆಗಳ ವಿರುದ್ಧ ಡಿ 23ರಂದು ಇಲವಾಲ ಗ್ರಾಮದಲ್ಲಿ ಬೃಹತ್ ರೈತ ಸಮಾವೇಶ, ನಗರದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮೈಸೂರು ಜಿಲ್ಲೆಯ ಇಲವಾಲ ಗ್ರಾಮದಲ್ಲಿ ಡಿಸೆಂಬರ್ 23 ರಂದು ಬೃಹತ್ ರೈತ ಸಮಾವೇಶ ಹಮ್ಮಿಕೊಂಡಿದ್ದಾಗಿ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿದ್ದು ರಾಜ್ಯ ಸರ್ಕಾರ ರೈತ ವಿರೋಧಿ ಮೂರು ಕಾಯ್ದೆಗಳನ್ನ ಜಾರಿಗೆ ತರಲು ಹೊರಟಿದ್ದು ಇದಕ್ಕೆ ನಾವು ವಿರೋಧ ವ್ಯಕ್ತಪಡಿಸಿದ್ದೇವೆ.