ಶಿರಸಿ: ನಗರದ ಅರಣ್ಯ ಮಹಾವಿದ್ಯಾಲಯದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಾವಯವ ಮತ್ತು ಸಿರಿಧಾನ್ಯಗಳ ನಡಿಗೆ-2026’ ಜಾಗೃತಿ ಜಾಥಾಕ್ಕೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿ,ಮಾತನಾಡಿ ಬದಲಾಗುತ್ತಿರುವ ಇಂದಿನ ಜೀವನಶೈಲಿಯಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾವಯವ ಕೃಷಿ ಪದ್ಧತಿ ಹಾಗೂ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳ ಬಳಕೆ ಇಂದಿನ ಅಗತ್ಯವಾಗಿದೆ.ನಮ್ಮ ಹಿರಿಯರು ಸಿರಿಧಾನ್ಯಗಳನ್ನು ಬಳಸುತ್ತಿದ್ದರಿಂದಲೇ ದೀರ್ಘಕಾಲ ಆರೋಗ್ಯವಾಗಿದ್ದರು. ಇಂದಿನ ಪೀಳಿಗೆ ಕೂಡ ಜಂಕ್ ಫುಡ್ಗಳ ಬದಲಾಗಿ ಸಿರಿಧಾನ್ಯಗಳನ್ನು ತಮ್ಮ ಆಹಾರದಲ್ಲಿ ಅಳವಡಿಸಿಕೊಳ್ಳ ಬೇಕು ಎಂದರು.