ನಂಜನಗೂಡು: ನಗರದಲ್ಲಿ ಶ್ರೀ ವೀರಶೈವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ವಾರ್ಷಿಕ ಮಹಾಸಭೆಗೆ ಚಾಲನೆ
ಶ್ರೀ ವೀರಶೈವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಗರದ ಶ್ರೀ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆಯಿತು. ಸಂಘದ ಅಧ್ಯಕ್ಷ ಎಸ್ ಸಿ ಬಸವಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ ಇಂದು ಸೊಸೈಟಿಯ 19ನೇ ವರ್ಷದ ಸರ್ವ ಸದಸ್ಯರ ಮಹಾಸಭೆ ಯಶಸ್ವಿಯಾಗಿ ಜರುಗಿದೆ. ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ. ಆದರೂ ಸಂಸ್ಥೆಗೆ ಸ್ವಂತ ಕಟ್ಟಡ ನಿರ್ಮಾಣ ಆಗಬೇಕಿದೆ.