ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಇಂದು ಸಂಪೂರ್ಣ ಗುಂಡಾ ಸರ್ಕಾರವಾಗಿ ಬದಲಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗುರುವಾರ ಮಧ್ಯಾಹ್ನ 2:30 ರ ಸುಮಾರಿಗೆ ಆರೋಪಿಸಿದರು. ಕೇಂದ್ರದ ವಿರುದ್ಧ ಸಂಘರ್ಷಕ್ಕೆ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಅವಕಾಶ ಮಾಡಿಕೊಟ್ಟಿದ್ದಾರೆ. ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ಸಾಧನೆ, ನೀತಿ–ಸಿದ್ಧಾಂತಗಳನ್ನು ಪ್ರಸ್ತಾಪಿಸಬಹುದು. ಆದರೆ ಅದನ್ನು ಕೇಂದ್ರದ ವಿರುದ್ಧ ಪ್ರಚೋದನೆ ಮಾಡುವ ವೇದಿಕೆಯಾಗಿಸಿದ್ದಾರೆ. ರಾಜ್ಯಪಾಲರ ಕಣ್ಣನ್ನೇ ತಿವಿಯುವ ರೀತಿಯಲ್ಲಿ ಭಾಷಣ ರೂಪಿಸಲಾಗಿದೆ. ಅದಕ್ಕಾಗಿಯೇ ರಾಜ್ಯಪಾಲರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರನ್ನು ಯಾರೂ ಅಡ್ಡಿಪಡಿಸುವಂತಿಲ್ಲ.