ನಿಪ್ಪಾಣಿ: ಶಿರಪೆವಾಡಿ ಗ್ರಾಮದ ಪ್ರೌಢಶಾಲೆಯಲ್ಲಿ ಬೆಂಕಿ ಅವಘಡ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಂಎಲ್ಸಿ ಪ್ರಕಾಶ್ ಹುಕ್ಕೇರಿ
ಶಿರಪೆವಾಡಿ ಗ್ರಾಮದ ಪ್ರೌಢಶಾಲೆಯಲ್ಲಿ ಬೆಂಕಿ ಅವಘಡ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಂಎಲ್ಸಿ ಪ್ರಕಾಶ್ ಹುಕ್ಕೇರಿ ಅವರು. ನಿಪ್ಪಾಣಿ ತಾಲೂಕಿನ ಶಿರಪೆವಾಡಿ ಗ್ರಾಮದ ಜೆ.ಎಮ್.ಸಂಕಪಾಳ ಪ್ರೌಢಶಾಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ಕಂಪ್ಯೂಟರ್ ಪ್ರಯೋಗಾಲಯಕ್ಕೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ, ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರು ಈ ವೇಳೆ ಈ ಘಟನೆದಿಂದ ವಿದ್ಯಾರ್ಥಿಗಳ ಪಾಠ ಕ್ರಮ ವ್ಯತ್ಯಯಗೊಳ್ಳದಂತೆ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದರು