ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಿ : ಶಾಸಕ ಕೆ.ವೈ. ನಂಜೇಗೌಡ ಪ್ರಗತಿಯಲ್ಲಿರುವ ಮಾಲೂರು ದೊಡ್ಡ ಕೆರೆ ಅಭಿವೃದ್ಧಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಕೆಲಸ ಚುರುಕುಗೊಳಿಸಿ ವೇಗವಾಗಿ ಪೂರ್ಣ ಗೊಳಿಸುವಂತೆ ಶಾಸಕ ಕೆವೈ ನಂಜೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಯೋಜನಾ ಪ್ರಾಧಿಕಾರದ ಕಛೇರಿಯ ಸಭಾಂಗಣದಲ್ಲಿ ಕೆರೆ ಅಭಿವೃದ್ಧಿ ಮತ್ತು ವೃತ್ತ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಶುಕ್ರವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಯೋಜನಾ ಪ್ರಾಧಿಕಾರದ ವತಿಯಿಂದ ಇತಿಹಾಸವುಳ್ಳ ಮಾಲೂರು ದೊಡ್ಡ ಕೆರೆಯನ್ನು ೨ ಹಂತಗಳಲ್ಲಿ ಅಭಿವೃದ್ಧಿ ಮಾಡಬೇಕೆಂದು ತೀರ್ಮಾನಿಸಿದ್ದು