ಪಾಂಡವಪುರ: ಪಾಂಡವಪುರದಲ್ಲಿ ದಲಿತ ಸಂಘಟನೆಗಳಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
ಪಾಂಡವಪುರ : ಭಾರತದ ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಗಳಾದ ಬಿ. ಆರ್. ಗವಾಯಿ ಅವರ ಮೇಲಿನ ಶೂ ಎಸೆದ ಘಟನೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾಂಡವ ಪುರ ಪಟ್ಟಣದ ಐದು ದೀಪ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ಮಧ್ಯಾಹ್ನ 12.30 ರ ಸಮಯದಲ್ಲಿ ನಡೆದ ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾ ಕಾರರು ವಕೀಲ ರಾಕೇಶ್ ಕುಮಾರ್ ಹಾಗೂ ಮನುವಾದಿ ಸಂಘಟನೆಗಳ ವಿರುದ್ಧ ದಿಕ್ಕಾರ ಕೂಗಿ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಂಘಟನೆಗಳ ಮುಖಂಡ ಮದನ್ ಕುಮಾರ್ ಅವರು ನ್ಯಾಯ ಮೂರ್ತಿಗಳ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಕೃತ್ಯವಾ ಗಿದ್ದು ಸರ್ಕಾರವ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.