ಬಳ್ಳಾರಿ: ಕೋಟ್ಯಂತರ ಮೌಲ್ಯದ ಸರ್ಕಾರಿ ಜಮೀನು ಒತ್ತುವರಿ ತೆರವು
ಬಳ್ಳಾರಿಯ ನಲ್ಲಚೆರುವು ಮತ್ತು ಮುಖ್ಯರಸ್ತೆ ಬದಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಹಾಗೂ ನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಸರ್ಕಾರಿ ಸ್ವತ್ತು ಅತಿಕ್ರಮಣ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.