ಮುಳಬಾಗಿಲು: ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿಶ್ವ ಆಹಾರ ದಿನಾಚರಣೆ
Mulbagal, Kolar | Oct 17, 2025 ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿಶ್ವ ಆಹಾರ ದಿನಾಚರಣೆ ಮುಳಬಾಗಿಲು : ಆಹಾರದ ಭದ್ರತೆ ಮತ್ತು ಸುಸ್ಥಿರ ಕೃಷಿಯ ಮಹತ್ವ. ಹಸಿವಿನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ಆಹಾರ ಬ್ಯಾಂಕುಗಳಿಗೆ ದೇಣಿಗೆ ನೀಡುವುದು, ಆಹಾರವನ್ನು ವ್ಯರ್ಥ ಮಾಡುವುದನ್ನು ಕಡಿಮೆ ಮಾಡುವುದು ಮತ್ತು ಆರೋಗ್ಯಕರ ಮತ್ತು ಸುಸ್ಥಿರ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಟಿ.ಹರೀಶ್ ತಿಳಿಸಿದರು. ನಗರದಲ್ಲಿನ ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ವಿಶ್ವ ಆಹಾರ ದಿನಾಚರಣೆಯ ಪ್ರಯುಕ್ತ ಶುಕ್ರವಾರ ಇಲಾಖೆಯ ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿಸಿ ಮಾತನಾಡಿ, ಅಕ್ಟೋಬರ್ ೧೬ ರಂದು, ನಾವು ವಿಶ್ವ ಆಹಾರ ದಿನವನ್ನು ಆಚರಿಸುತ್ತಿದ್ದೇವೆ ಎಂದರು.