ಹುಬ್ಬಳ್ಳಿ ನಗರ: ನಗರದಲ್ಲಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದ ಹುಧಾಮಪಾ ಮೇಯರ್
ಧಾರವಾಡದಲ್ಲಿ ನಡೆಯುತ್ತಿರುವ 2025ರ ಕೃಷಿ ಮೇಳಕ್ಕೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹುಧಾಮಪಾ ಮೇಯರ್ ಜ್ಯೋತಿ ಪಾಟೀಲ್ ಅವರು ಆತ್ಮೀಯವಾಗಿ ಸ್ವಾಗತಿಸಿ , ಅವಳಿ ನಗರದ ಅಭಿವೃದ್ಧಿ ಪರ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ ಸಚಿವರಾದ ಸಂತೋಷ್ ಲಾಡ್, ಶಾಸಕರಾದ ಎನ್.ಎಚ್.ಕೋನರಡ್ಡಿ, ಪ್ರಸಾದ್ ಅಬ್ಬಯ್ಯ ಸೇರಿದಂತೆ ಉಪಸ್ಥಿತರಿದ್ದರು.