ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐ.ಎನ್.ಎಸ್ ಕದಂಬ ನೌಕಾನೆಲೆಯ , ನೌಕಾದಳ ಭವನದ ಆವರಣದಲ್ಲಿ ಗುರುವಾರ ಸಂಜೆ 7ರವರೆಗೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ನೌಕೆಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೌಕೆಗಳಿಂದ ಸಿಡಿಮದ್ದುಗಳನ್ನು ಸಿಡಿಸಲಾಯಿತು.