ಶಿಕಾರಿಪುರ: ಬಗನಕಟ್ಟೆ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ
ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ಗುರುವಾರ ಮಧ್ಯಾನ ಮೂರು ಗಂಟೆಗೆ ಅದ್ಧೂರಿಯಾಗಿ ನಡೆಯಿತು. ಸ್ವಾಮಿಯ ರಥೋತ್ಸವ ಊರಿನ ಗ್ರಾಮಸ್ಥರು ಶ್ರದ್ಧಾಭಕ್ತಿ, ಸಂಭ್ರಮದಿಂದ ನೆರವೇರಿಸಿದರು. ದೇವಸ್ಥಾನದ ಮುಂಭಾಗದಿಂದ ವೀರಭದ್ರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆಯೊಂದಿಗೆ ರಥೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು