ಕೋಗಿಲು ಬಡಾವಣೆ ತ್ಯಾಜ್ಯ ವಿಲೇವಾರಿ ಜಾಗದ ಅಕ್ರಮ ಒತ್ತುವರಿ ಪ್ರಕರಣದಲ್ಲಿ ನಿರಾಶ್ರಿತರಾಗಿರುವ ಅರ್ಹರು ಹಾಗೂ ಸ್ಥಳೀಯರಿಗೆ ಪುನರ್ವಸತಿ ಕಲ್ಪಿಸಲಾಗುವುದು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ವೇಣುಗೋಪಾಲ್ ಅವರು ನಮ್ಮ ಆಡಳಿತದಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿದ್ದು, ನಮಗೆ ಸಲಹೆ ನೀಡಲು ಅವರಿಗೆ ಎಲ್ಲಾ ಅಧಿಕಾರ ಇದೆ. ಬಿಜೆಪಿ ರಾಷ್ಟ್ರೀಯ ನಾಯಕರು ಬಂದು ರಾಜ್ಯ ನಾಯಕರಿಗೆ ಸಲಹೆ ನೀಡುವುದಿಲ್ಲವೇ? ನಮ್ಮದು ರಾಷ್ಟ್ರೀಯ ಪಕ್ಷ, ನಮಗೆ ನಮ್ಮದೇ ಜವಾಬ್ದಾರಿ ಇದೆ.