ಯಲ್ಲಾಪುರ: ಉಮ್ಮಚಗಿ ಶ್ರೀಮತಾ ಸಹಕಾರಿ ಸಂಘಕ್ಕೆ 39ಲಕ್ಷ ರೂ ಲಾಭದಲ್ಲಿ,ಅಧ್ಯಕ್ಷ ಜಿ ಎನ್ ಹೆಗಡೆ ಮಾಹಿತಿ
ಯಲ್ಲಾಪುರ : ಶ್ರೀಮಾತಾ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಜಿ.ಎನ್. ಹೆಗಡೆ ಹಿರೇಸರ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಯಲ್ಲಾಪುರ : ಗ್ರಾಮೀಣ ಪ್ರದೇಶದ ಸಂಸ್ಥೆಯಾಗಿಯೂ ಸಹ ನಮ್ಮ ಸಂಘವು 21 ವರ್ಷಗಳ ಅವಧಿಯಲ್ಲಿ ಹಲವು ಎಡರು ತೊಡರುಗಳನ್ನು ಎದುರಿಸಿ ಉತ್ತಮವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 39.02 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದರು.