ತೀರ್ಥಹಳ್ಳಿ: ಗೋಕಳ್ಳತನಕ್ಕೆ ಅಧಿಕಾರಿಗಳ ಸಾಥ್: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ತಾಲೂಕಿನಲ್ಲಿ ನಡೆಯುತ್ತಿರುವ ಗೋಕಳ್ಳತನಕ್ಕೆ ಅಧಿಕಾರಿಗಳು ಸಾತ್ ನೀಡುತ್ತಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿಯ ತಾಲೂಕು ಕಚೇರಿ ಮುಂಭಾಗ ಸೋಮವಾರ ತಾಲೂಕು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಗೋ ಕಳ್ಳರಿಗೆ ಸಾಥ್ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.