ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆರಿಗೆ ಜೀವ ಬೆದರಿಕೆ ಖಂಡಿಸಿ ಚಿತ್ತಾಪುರ ಪಟ್ಟಣ ಬಂದ್: ಟೈರ್‌ಗೆ ಬೆಂಕಿ ಹಚ್ಚಿ ಕೈ ಕಾರ್ಯಕರ್ತರ ಆಕ್ರೋಶ
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಖಂಡಿಸಿ ಇಂದು ಖರ್ಗೆ ಪ್ರತಿನಿಧಿಸುವ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ.. ಅಕ್ಟೋಬರ್ 16 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದಲ್ಲಿ ಕಾರ್ಯಕರ್ತರು, ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ಟೈರಗೆ ಬೆಂಕಿ ಹಚ್ಚಿ ಪ್ರಿಯಾಂಕ್ ಖರ್ಗೆರಿಗೆ ಬೆದರಿಕೆ ಹಾಕಿದ ಘಟನೆಯನ್ನ ತೀವ್ರವಾಗಿ ಖಂಡಿಸಿದರು.. ಇನ್ನೂ ಕೂಡಲೇ ಬೆದರಿಕೆ ಹಾಕಿದ ವ್ಯಕ್ತಿಯನ್ನ ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ..