ಬೆಂಗಳೂರು ಉತ್ತರ: ಸೋಮವಾರದಿಂದ ಅಧಿವೇಶನ, ನಗರದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಭೆ
ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಹಿನ್ನೆಲೆ ಬಿಜೆಪಿ- ಜೆಡಿಎಸ್ ಮೈತ್ರಿ ನಾಯಕರ ಸಮನ್ವಯ ಸಭೆ ಶಿವಾನಂದ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಸಂಜೆ 5 ಗಂಟೆ ಯಿಂದ ನಡೆದಿದೆ. ವಿಧಾನಸಭೆ ಹಾಗೂ ಪರಿಷತ್ ನಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಬಿಜೆಪಿ ಕಡೆಯಿಂದ ವಿಪಕ್ಷ ನಾಯಕ ಆರ್.ಅಶೋಕ, ರಾಜ್ಯಾಧ್ಯಕ್ಷ ವಿಜಯೇಂದ್ರ, ಭಾಗಿಯಾಗಿದ್ದು, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಅರವಿಂದ್ ಬೆಲ್ಲದ್, ಅಶ್ವಥ್ ನಾರಾಯಣ, ಸುನೀಲ್ ಕುಮಾರ್, ಸಿಟಿ ರವಿ ಸೇರಿ ಹಲವರು ಭಾಗಿಯಾಗಿದ್ದರು. ಇನ್ನು ಜೆಡಿಎಸ್ ಕಡೆಯಿಂದ ಜೆಡಿಎಲ್ ಪಿ ನಾಯಕ ಸುರೇಶ್ ಬಾಬು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದರು.