ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಇಂದು ಬೆಳಗ್ಗೆ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಟೀಪರ್ ಕೋಚ್ ಬಸ್ ಅತಿವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬಸ್ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಟೋಲ್ ಪ್ಲಾಜಾ ಬಂದ್ ಆಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಅಪಘಾತದಲ್ಲಿ ಬಸ್ ಚಾಲಕ ಹಾಗೂ ಸಹ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ.