ಯಲ್ಲಾಪುರ: ಕುಂದರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜ್ಜಿಗೆಹಳ್ಳ ಗ್ರಾಮದಲ್ಲಿ ಸುಮಾರು ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಿ.ಸಿ. ರಸ್ತೆ ಕಾಮಗಾರಿಯನ್ನುಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣದಿಂದ ಗ್ರಾಮಸ್ಥರ ಸಂಚಾರ ಸುಗಮವಾಗುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.