ಹಾವೇರಿ: ಮಾಜಿ ಮುಖ್ಯಮಂತ್ರಿ ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಶುಕ್ರವಾರದ ಗದಗ ಪ್ರವಾಸ ರದ್ದು
Haveri, Haveri | Oct 2, 2025 ಮಾಜಿ ಮುಖ್ಯಮಂತ್ರಿ ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಶುಕ್ರವಾರ ಗದಗ ಜಿಲ್ಲೆಯಲ್ಲಿ ಪ್ರವಾಸ ರದ್ದಾಗಿದೆ. ಶನಿವಾರ ಪ್ರವಾಸ ನಿಗಧಿಯಾದಂತೆ ಇರಲಿದೆ ಎಂದು ಅವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶನಿವಾರ ಬೆಂಗಳೂರಿಂದ ರಸ್ತೆ ಮಾರ್ಗವಾಗಿ ಬಸವರಾಜ್ ಬೊಮ್ಮಾಯಿ ಹಾವೇರಿಯ ಕರ್ಜಗಿ ಗ್ರಾಮಕ್ಕೆ ಆಗಮಿಸಲಿದ್ದಾರೆ.ನಂತರ ಹುಬ್ಬಳ್ಳಿಗೆ ಪಯಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.