ನೂತನ ಮನೆ ನಿರ್ಮಾಣಕ್ಕೆ ಎಲೆಕ್ಟ್ರಿಷಿಯನ್ ಕೆಲಸ ಮಾಡಲು ಮುಂದಾಗಿದ್ದ ಎಲೆಕ್ಟ್ರಷಿಯನ್ ಕಟ್ಟಡದಿಂದ ಬಿದ್ದು ಕಳೆದ ವಾರ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸೋಮವಾರ ಸಂಜೆ 5 ಗಂಟೆಗೆ ಚಿಕಿತ್ಸೆ ಫಲಿಸದೇ ಸಾವನಪ್ಪಿರುವ ಘಟನೆ ಭದ್ರಾವತಿಯ ಹೆಬ್ಬಂಡಿಯಲ್ಲಿ ನಡೆದಿದೆ. ಹಬ್ಬದ ವೇಳೆ ಹೆಬ್ಬಂಡಿಯಲ್ಲಿ ನೂತನ ಮನೆ ನಿರ್ಮಾಣವಾಗುತ್ತಿದ್ದ ಕಟ್ಟಡದಲ್ಲಿ ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಸುರೇಶ್ (42) ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದರು. ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸುರೇಶ್ ಸಾವನಪ್ಪಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.