ಚನ್ನರಾಯಪಟ್ಟಣ: ಸಂತೆ ಶಿವರ ಗ್ರಾಮದಲ್ಲಿ ಖ್ಯಾತ ಕಾದಂಬರಿಕಾರ ಎಸ್ ಎಲ್ ಬೈರಪ್ಪ ಅವರ ಅಸ್ಥಿ ವಿಸರ್ಜನೆ
ಹಾಸನ: ಭಾರತದ ಖ್ಯಾತ ಕಾದಂಬರಿಕಾರ, ಚಿಂತಕ ಎಸ್.ಎಲ್. ಭೈರಪ್ಪ ಅವರ ಅಸ್ಥಿ ವಿಸರ್ಜನೆ ಇಂದು ಅವರ ಹುಟ್ಟೂರಾದ ಚನ್ನರಾಯಪಟ್ಟಣ ಸಂತೇಶಿವರದಲ್ಲಿ ನೆರವೇರಿತು. ತಾಲ್ಲೂಕಿನ ಭೈರಪ್ಪ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯ್ಶಂಕರ್ ವಿಧಿ ವಿಧಾನಗಳಂತೆ ಪೂಜೆ ಸಲ್ಲಿಸಿ, ನೀರು ತುಂಬಿಸಿರುವ ಸಂತೇಶಿವರ ಕೆರೆಯಲ್ಲಿ ಅಸ್ಥಿ ವಿಸರ್ಜನೆ ನೆರವೇರಿಸಿದರು. ಅಸ್ಥಿ ವಿಸರ್ಜನೆಗೂ ಮುನ್ನ ಮಂತ್ರೋಚ್ಚಾರಣೆ, ಘೋಷಗಳು ಮೊಳಗುತ್ತಿದ್ದಂತೆ ಗ್ರಾಮದಲ್ಲಿ ಅಸ್ಥಿ ಮೆರವಣಿಗೆ ನಡೆದಿದ್ದು, ನೂರಾರು ಮಂದಿ ಗ್ರಾಮಸ್ಥರು ಮತ್ತು ಅಭಿಮಾನಿಗಳು ಭಾವನಾತ್ಮಕವಾಗಿ ಸಾಕ್ಷಿಯಾದರು.