ಶೋರಾಪುರ: ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ತಾಲೂಕು ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ
ಯಾದಗಿರಿ ಜಿಲ್ಲೆಯ ಸುರಪುರ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ತಾಲೂಕು ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಅವರಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪತಳಿಗೆ ಸನ್ಮಾನಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಶಾಸಕರು ಮಾತನಾಡಿ ಸರ್ದಾರ್ ವಲ್ಲಭಭಾಯ್ ಪಟೇಲರ ಪ್ರಯತ್ನದ ಫಲವಾಗಿ ನಿಜಾಮನ ದೂರ ಆಡಳಿತದಿಂದ ನಮ್ಮ ಕಲ್ಯಾಣ ಕರ್ನಾಟಕ ಅಖಂಡ ಭಾರತದ ಒಕ್ಕೂಟಕ್ಕೆ ಸೇರಿದ ಈ ದಿನದಂದು ನಾವು ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.