ದಾವಣಗೆರೆ: ಗ್ಯಾರಂಟಿ ಯೋಜನೆಯಿಂದ ರಾಜ್ಯವನ್ನು ದಿವಾಳಿ ಮಾಡಿದೆ ಕಾಂಗ್ರೆಸ್ ಸರ್ಕಾರ: ನಗರದಲ್ಲಿ ರಾಜ್ಯ ಬಿಜೆಪಿ ವಕ್ತಾರ ಚಂದ್ರಶೇಖರ
ಗ್ಯಾರಂಟಿ ಯೋಜನೆಯಿಂದ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ದಿವಾಳಿ ಮಾಡಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಚಂದ್ರಶೇಖರ ಹೇಳಿದರು. ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಶಾಸಕ ಶಾಮನೂರು ಶಿವಶಂರಪ್ಪ ಅವರು ಮಹಿಳೆಯರು ಅಡುಗೆ ಮಾಡುವುದಕ್ಕೆ ಮಾತ್ರ ಸೀಮಿತ ಎಂದು ಹೇಳಿಕೆ ನೀಡುತ್ತಾರೆ. ಇದು ಸ್ತ್ರೀಯರಿಗೆ ಅವರು ನೀಡುವ ಗೌರರವನ್ನು ತೋರುತ್ತದೆ. ಶಕ್ತಿ ಸ್ವರೂಪಿನಿ ಮಹಿಳೆ. ಮಹಿಳೆಯರ ಬಗ್ಗೆ ಮನಬಂದತೆ ಮಾತನಾಡುವ ಕಾಂಗ್ರೆಸಿಗರಿಗೆ ರಾಜ್ಯದ ಜನ ಲೋಕಸಭಾ ಚುನಾವಣೆ ಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.