ಜೆಡಿಎಸ್ ಯುವ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ವಡ್ಡರಹಳ್ಳಿ ಮಹದೇವೇಗೌಡ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಶಾಸಕ ಎಚ್.ಟಿ.ಮಂಜು ಅವರು ಕೆ ಆರ್ ಪೇಟೆ ಪಟ್ಟಣದ ಶಾಸಕರ ಕಛೇರಿಯಲ್ಲಿ ಅಭಿನಂದಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕೆ ಆರ್ ಪೇಟೆ ಪಟ್ಟಣದ ಶಾಸಕರ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ರೈತ ಮೋಚರ್ಾ ಕೆ.ಆರ್.ಪೇಟೆ ತಾಲ್ಲೂಕು ಅಧ್ಯಕ್ಷ ಹಾಗೂ ತಾ.ಪಂ.ಮಾಜಿ ಸದಸ್ಯಬೂಕನಕೆರೆ ಹುಲ್ಲೇಗೌಡ ಅವರು ಮಾತನಾಡಿ, ಜೆಡಿಎಸ್ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಿ ನಿಮ್ಮ ಕುತಂತ್ರದ ರಾಜಕಾರಣ ನಮಗೂ ಗೊತ್ತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ವಿರುದ್ಧ ವಾಗ್ದಾಳಿ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಯವರು ಈ ಮಟ್ಟಕ್ಕೆ ಬೆಳೆಯಲು ಕೇಂದ್ರ ಸಚಿವ ಕುಮಾರಸ್ವಾಮ