ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ 12:30 ರ ಸುಮಾರಿಗೆ ಮಾಧ್ಯಮಗಳಿಗೆ ತಿಳಿಸಿದರು. ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು.50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ.