ಬೆಂಗಳೂರು ಉತ್ತರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕೆ. ಗೋಪಾಲಯ್ಯರಿಂದ ಮಹಾಲಕ್ಷ್ಮೀ ಲೇಔಟ್ನಲ್ಲಿ ಗಿಡ ನೆಡುವ ಕಾರ್ಯಕ್ರಮ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ಜನ್ಮದಿನದ ಅಂಗವಾಗಿ ಮಹಾಲಕ್ಷ್ಮೀ ಲೇಔಟ್ನ ನಾಗಪುರ ವಾರ್ಡಿನಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇಂದು ಈ ಕಾರ್ಯಕ್ರಮಕ್ಕೆ ಮಾನ್ಯ ಕೇಂದ್ರ ಸಚಿವೆ ಸುಶ್ರೀ ಶೋಭಾ ಕರಂದ್ಲಾಜೆ ಹಾಗೂ ಕೆ. ಗೋಪಾಲಯ್ಯ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮಾಜಿ ಉಪ ಮಹಾಪೌರರಾದ ಶ್ರೀಮತಿ ಹೇಮಲತಾ ಗೋಪಾಲಯ್ಯ, ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ವೆಂಕಟೇಶ್ ಮೂರ್ತಿ, ರೈಲ್ವೆ ನಾರಾಯಣ್, ಗಂಗಹನುಮಯ್ಯ, ಪ್ರಸನ್ನ, ಉಮಾಪತಿ ನಾಯ್ಡು, ವಾರ್ಡ್ ಅಧ್ಯಕ್ಷ ಲೋಕೇಶ್ ಹಾಗೂ ಅನೇಕ ಸ್ಥಳೀಯ ಮುಖಂಡರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.